ಮೈಸೂರು : ಮೈಸೂರಿನಲ್ಲಿ ಭೀಕರ ಅಗ್ನಿ ಅವಘಡ ನಡೆದಿದ್ದು ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂಪಾಯಿ ಬಟ್ಟೆ ಸೇರಿದಂತೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಹೌದು ಮೈಸೂರಿನಲ್ಲಿ ಬಟ್ಟೆ ಅಂಗಡಿ ಒಂದು ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ.ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮೈಸೂರಿನ ಟಿ. ನರಸೀಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ಕೂಡಲೇ ಅಗ್ನಿಶಾಮಕದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಕೋಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿವೆ.