ಮೈಸೂರು: ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ.
ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 1 ಮತ್ತು 8, 2025 ರಂದು (ಶುಕ್ರವಾರ) ಯಶವಂತಪುರದಿಂದ ರಾತ್ರಿ 10:30 ಗಂಟೆಗೆ ಹೊರಟು, ಮರುದಿನ (ಶನಿವಾರ) ಬೆಳಗಿನ ಜಾವ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ.
ರೈಲು ಸಂಖ್ಯೆ 06588 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 2 ಮತ್ತು 9, 2025 ರಂದು (ಶನಿವಾರ) ತಾಳಗುಪ್ಪದಿಂದ ಬೆಳಿಗ್ಗೆ 08:15 ಗಂಟೆಗೆ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ.
ಈ ರೈಲು ಎರಡೂ ಮಾರ್ಗದಲ್ಲಿ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ.
ಜುಲೈ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಏ.22ರಿಂದ ಜೂ.17ರವರೆಗೆ ಪ್ರಧಾನಿ ಮೋದಿ-ಟ್ರಂಪ್ ನಡುವೆ ದೂರವಾಣಿ ಸಂಭಾಷಣೆ ನಡೆದಿಲ್ಲ: ಜೈಶಂಕರ್