ಬೆಂಗಳೂರು: ಕರ್ನಾಟಕದಲ್ಲಿ ನಡೆದಿದ್ದಂತ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪದ ಸಂಬಂಧ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಡಿದೆದ್ದಿದ್ದಾರೆ. ಆಗಸ್ಟ್.4ರಂದು ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬೆಂಗಳೂರಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ಹೌದು ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ಇಳಿಯಲಿದ್ದಾರೆ. ಆಗಸ್ಟ್.4ರಂದು ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೂ ಪಾದಯಾತ್ರೆಯನ್ನು ನಡೆಸಲಿದ್ದಾರೆ.
ಆಗಸ್ಟ್.4ರಂದು ರಾಹುಲ್ ಗಾಂಧಿ ಬೆಂಗಳೂರಲ್ಲಿ ನಡೆಸಲಿರುವಂತ ಪಾದಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.
ಬೆಂಗಳೂರಲ್ಲಿ ಬೀದಿ ನಾಯಿ ದಾಳಿಗೆ ವೃದ್ಧ ಬಲಿ ಕೇಸ್: ಬಿಬಿಎಂಪಿ ಹೇಳಿದ್ದೇನು ಗೊತ್ತಾ?
BREAKING: ಮಂಡ್ಯದ ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರಿಗೆ ನಿಷೇಧ: ತಹಶೀಲ್ದಾರ್ ಆದೇಶ