ಬೆಂಗಳೂರು: ಡಿಸಿಇಟಿ-25 ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್ ನಲ್ಲಿ ಒಟ್ಟು 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದವರು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ, ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜು.30ರಿಂದ 31ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು ಆಗಸ್ಟ್ 1ರೊಳಗೆ ಶುಲ್ಕ ಪಾವತಿಸಬೇಕು. ಹಾಗೆಯೇ ಈ ದಿನಾಂಕಗಳಂದು ಸೀಟು ಖಚಿತತೆಯ ಚೀಟಿ ಡೌನ್‌ಲೋಡ್ ಮಾಡಿಕೊಂಡು, ಆಗಸ್ಟ್ 2ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ, ಸೀಟು ಹಂಚಿಕೆ ಮಾಡಿರುವ ಕಾರಣದಿಂದ ಹಂಚಿಕೆಯಾದ ಸೀಟನ್ನು ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ. ಅಲ್ಲದೆ, ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಯಾವುದೇ ಛಾಯ್ಸ್ ಕೂಡ ಇರುವುದಿಲ್ಲ. ಹೀಗಾಗಿ ಕಡ್ಡಾಯವಾಗಿ ನಿಗದಿತ ದಿನಾಂಕಗಳಂದು ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ವಿವರಿಸಿದರು.
BREAKING: ಕರ್ನಾಟಕದಲ್ಲಿ ಎಂಪಿ ಚುನಾವಣೆ ವೇಳೆ ಅಕ್ರಮ: ಆ.4ರಂದು ಬೆಂಗಳೂರಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ
ಬೆಂಗಳೂರಲ್ಲಿ ಬೀದಿ ನಾಯಿ ದಾಳಿಗೆ ವೃದ್ಧ ಬಲಿ ಕೇಸ್: ಬಿಬಿಎಂಪಿ ಹೇಳಿದ್ದೇನು ಗೊತ್ತಾ?