ಬೆಂಗಳೂರು: ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಮೂಲಕ ನಟಿ ರಮ್ಯಾ ಬಳಿಕ ನಟ ಪ್ರಥಮ್ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರ ಸಾರಿದ್ದಾರೆ.
ಇಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ತೆರಳಿದಂತ ನಟ ಪ್ರಥಮ್ ಅವರು, ನಟ ದರ್ಶನ್ ಅಭಿಮಾನಿಗಳು ತಮಗೆ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದರು.
ಇದಕ್ಕೂ ಮುನ್ನಾ ವೀಡಿಯೋ ಮಾಡಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಇದೀಗ ಎಸ್ಪಿಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ ನಿನ್ನೆ ನಟಿ ರಮ್ಯಾ ಅವರು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದಂತ ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 43 ಅಕೌಂಟ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಭಾರತಕ್ಕೆ ‘ಆಪರೇಷನ್ ಸಿಂಧೂರ್’ ನಿಲ್ಲಿಸುವಂತೆ ಯಾವುದೇ ‘ವಿಶ್ವ ನಾಯಕ’ರು ಕೇಳಿಲ್ಲ: ಪ್ರಧಾನಿ ಮೋದಿ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ