ಕೊಪ್ಪಳ : ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಬರುತ್ತೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಕಾಯಿಲೆ ಹೆಚ್ಚಾಗಿದೆ ಎಂದು ಕೊಪ್ಪಳದ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ಕೊಟ್ಟಿದ್ದಾರೆ. ಅತಿ ಹೆಚ್ಚಾಗಿ ಯೂರಿಯಾ ಗೊಬ್ಬರ ಬಳಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಅತಿಯಾದ ದುಷ್ಪರಿಣಾಮ ಬೀರುತ್ತದೆ ಎಂದು ಕೊಪ್ಪಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಾಕಿಂಗ್ ಮಾಹಿತಿ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರಪ್ಪ ಈ ವಿಚಾರ ತಿಳಿಸಿದ್ದು ಭೂಮಿಗೆ ಯೂರಿಯಾ ಗೊಬ್ಬರ, ಕೆಮಿಕಲ್ ಗಳನ್ನು ಅತಿಯಾಗಿ ಬಳಸುವುದರಿಂದ ಇಂತಹ ಕೆಮಿಕಲ್ ಯುಕ್ತ ಆಹಾರವನ್ನು ತಿನ್ನುವುದರಿಂದ ಕ್ಯಾನ್ಸರ್ ಕಾಯಿಲೆ ಬರುವ ಸಾಧ್ಯತೆ ಇದೆ. ಹಾಗಾಗಿ ಬೆಳೆಗಳಿಗೆ ಅತಿಯಾದ ಯುವರಿಯಾಗ ಬರಾಕೋಕ್ಕೆಮಿಕಲ್ ಗಳನ್ನು ಬಳಸುವುದನ್ನು ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದರು.
ಹೊಸಪೇಟೆ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ರಸಗೊಬ್ಬರ ಹೆಚ್ಚು ಬಳಸುವುದರಿಂದ ಕ್ಯಾನ್ಸರ್ ಬರುತ್ತೆ ವೈದ್ಯಕೀಯ ವರದಿಯಲ್ಲಿ ತಿಳಿದು ಬಂದಿದೆ. ನಮ್ಮ ಇಲಾಖೆಯಲ್ಲಿ ಒಬ್ಬ ಅಧಿಕಾರಿಯವರು ಸ್ಟಮಕ್ಕ್ ಕ್ಯಾನ್ಸರ್ ಇಂದ ಬಳಲುತ್ತಿದ್ದರು. ರಸಗೊಬ್ಬರ ಮತ್ತು ಕೀಟನಾಶಕ ಹೆಚ್ಚು ಬಳಸುವುದರಿಂದ ಆಹಾರ ಧಾನ್ಯಗಳನ್ನು ಮನುಷ್ಯ ಸೇವಿಸುವುದರಿಂದ ದೇಹದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.