ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಡಾ ಹಗರಣ ಸಂಬಂಧ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಆಯೋಗವನ್ನು ರಚಿಸಲಾಗಿತ್ತು. ಈ ಆಯೋಗವು ತನಿಖೆಯನ್ನು ನಡೆಸಿ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ನಿನ್ನೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದಂತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಏಕಸದಸ್ಯ ಆಯೋಗವು, ಆರು ಸಂಪುಟಗಳ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತ ವರದಿಯನ್ನು ಸಲ್ಲಿಸಿದೆ.
ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ತನಿಖಾ ಆಯೋಗದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವಂತ ಮುಡಾ ಹಗರಣದ ತನಿಖಾ ವರದಿಯನ್ನು ಸರ್ಕಾರವು ಮುಂದಿನ ಕ್ಯಾಬಿನೇಟ್ ನಲ್ಲಿ ಮಂಡಿಸುವ ಸಾಧ್ಯತೆ ಇದೆ. ಆ ಬಳಿಕ ವರದಿಯನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.