ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ಇಂದು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ವಾದ ಪ್ರತಿ ವಾದವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತ್ತು. ಇದೀಗ ಈ ಪ್ರಕರಣದಲ್ಲಿ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.
Karnataka | Expelled JDS Leader and former Lok Sabha MP Prajwal Revanna convicted by the Special Court for People's Representatives in connection with a rape case of a domestic worker at a farmhouse in Holenarasipura in Hassan district
— ANI (@ANI) August 1, 2025
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿವೆ. ಇವುಗಳಲ್ಲಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಜ್ವಲ್ ಪ್ರಕರಣದಲ್ಲಿ ಪ್ರಕಟವಾಗಿರುವ ಮೊದಲ ತೀರ್ಪು ಇದಾಗಿದೆ.