ಶಿವಮೊಗ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ದಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತರು ವೆಬ್‌ಸೈಟ್ www.kacdc.karnataka.gov.in ರಲ್ಲಿ ದಿ: 31/10/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 08182-229634 ನ್ನು ಅಥವಾ ಹಾಗೂ ಕ್ಯೂಆರ್ ಕೋಡ್ ಬಳಸಿ ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.
BREAKING: ಯುಜಿ ಸಿಇಟಿ/ನೀಟ್-2025ರ ಫಲಿತಾಂಶ ಪ್ರಕಟಿಸಿದ ಕೆಇಎ | UGCET/UGNEET-2025
SHOCKING: 40 ವರ್ಷದ ವಿವಾಹಿತನೊಂದಿಗೆ 13 ವರ್ಷದ ಬಾಲಕಿ ಮದುವೆ : ಅರ್ಚಕ ಸೇರಿ ನಾಲ್ವರು ವಿರುದ್ಧ `FIR’ ದಾಖಲು.!