ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ನ್ಯಾ. ಸಂತೋಷ್ ಗಜಾನನ ಭಟ್ ಕೆ ಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. 4 ಕೇಸ್ ಗಳಿಗೆ ಸಂಬಂಧಿಸಿದಂತೆ ಇಂದು ಕೋರ್ಟ್ ಮೊದಲನೇ ಕೇಸಿಗೆ ತೀರ್ಪು ಇಂದು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಯಿತು. ಎರಡು ಕಡೆಯ ವಕೀಲರಿಂದ ವಾದ ಆಲಿಸಿದ ನ್ಯಾಯಾಧೀಶ ಸಂತೋಷದ ಕ್ಷಣ ಭಟ್ ಅವರು ಕೆಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದರು ನಾಳೆ ಪ್ರಜ್ವಲ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗುತ್ತದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಕಳೆದ ಕಳೆದ 14 ತಿಂಗಳಿನಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ.
Karnataka | Expelled JDS Leader and former Lok Sabha MP Prajwal Revanna convicted by the Special Court for People's Representatives in connection with a rape case of a domestic worker at a farmhouse in Holenarasipura in Hassan district
— ANI (@ANI) August 1, 2025
ಪ್ರಕರಣ ಹಿನ್ನೆಲೆ?
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ತನಿಖೆ ಆರಂಭವಾಯಿತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದರು.
ಐಪಿಸಿ ಸೆಕ್ಷನ್ 376 (2)(k) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (n) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(A) ಲೈಂಗಿಕತೆ ಬೇಡಿಕೆ ಇಡುವುದು. 354 (B) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (c) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ.