ಕೊಡಗು : ಕೊಡಗು ಜಿಲ್ಲೆಯಲ್ಲಿ ಭಾರಿ ಭೂ ಕುಸಿತ ಉಂಟಾಗಿದ್ದು, ಪಾಲಂಗಾಲ ಗ್ರಾಮ ಬಳಿಯ ಅರಣ್ಯ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಲಂಗಾಲ ಗ್ರಾಮದಲ್ಲಿ ಭೂ ಕುಸಿತವಾಗಿದೆ.
ಅರಣ್ಯ ಪ್ರದೇಶವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ