ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರ ಹಾಗೂ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ರೈತರಿಗೆ ವಂಚಿಸಿದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿದ್ದರು.
ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರಿಗೆ ನಿರಂತರ ಕಿರುಕುಳ ನೀಡುತ್ತಾ, ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಲಾಯಿತು.
ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ
ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಈ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಅವರು ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ರಾದ ಸ್ವಾಮಿ ರಾವ್, ಆರ್.ಸಿದ್ದರಾಮಣ್ಣ, ಜಿಲ್ಲಾ ಅಧ್ಯಕ ಎನ್ ಕೆ ಜಗದೀಶ್, ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಟಿ.ಡಿ.ಮೇಘರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್ ದತ್ತಾತ್ರಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ ಬಿಳಕಿ, ಕುಮಾರ್ ನಾಯ್ಡು, ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ರೈತ ಮೋರ್ಚಾ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಪ್ರಮುಖರು ಜಿಲ್ಲೆಯ ತಾಲೂಕಿನ ರೈತ ಪ್ರಮುಖರು, ರೈತರು, ಕಾರ್ಯಕರ್ತರು ಉಪಸ್ಥಿತರಿದ್ದರು.
BREAKING: ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು
ಸಾಗರದ ‘ತಾಯಿ-ಮಕ್ಕಳ ಆಸ್ಪತ್ರೆ’ಯಲ್ಲಿ ಕಳುವಾದ ಜನರೇಟರ್ ಹಾಳಾಗಿತ್ತು, 62.5 ಕೆವಿ ಸಾಮರ್ಥ್ಯದ್ದು: ವರದಿ