ನವದೆಹಲಿ : ದೇಶದ ರೈತರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇಂದು PM-Kisan ಯೋಜನೆಯ 20 ನೇ ಕಂತು ಬಿಡುಗಡೆಯಾಗಲಿದ್ದು, ರೈತರು ತಮ್ಮ ಬ್ಯಾಂಕ್ ಖಾತೆಗೆ 2,000 ರೂ.ಗಳನ್ನು ಪಡೆಯಲಿದ್ದಾರೆ.
ಹೌದು, PM ಕಿಸಾನ್ ನ 20 ನೇ ಕಂತಿನ ಬಿಡುಗಡೆ ದಿನಾಂಕವನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 2 ರ ಇಂದು ದೇಶಾದ್ಯಂತ 9.8 ಕೋಟಿಗೂ ಹೆಚ್ಚು ರೈತರಿಗೆ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.
ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಮುಂದಿನ (20 ನೇ) ಕಂತನ್ನು ಆಗಸ್ಟ್ 2 ರಂದು ವಾರಣಾಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದೆ.
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಾರಣಾಸಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಪ್ರಯೋಜನವು ಗರಿಷ್ಠ ಸಂಖ್ಯೆಯ ರೈತರಿಗೆ ತಲುಪುವಂತೆ ಖಚಿತಪಡಿಸಿಕೊಳ್ಳಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಯಿತು.