ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ಶನಿವಾರ ದೃಢಪಡಿಸಿದ್ದಾರೆ.
ಸದ್ಯ ಕುಲ್ಗಮ್ ಜಿಲ್ಲೆಯ ಅಖಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಎಸ್ಒಜಿ, ಜೆ & ಕೆ ಪೊಲೀಸರು, ಸೇನೆ ಮತ್ತು ಸಿಆರ್ಪಿಎಫ್ ಕಾರ್ಯಾಚರಣೆ ನಡೆಸುತ್ತಿವೆ.
ಭಯೋತ್ಪಾದಕರು ನಿಷೇಧಿತ ಲಷ್ಕರ್-ಎ-ತೈಬಾ (LeT) ನ ಒಂದು ಭಾಗವಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಗೆ ಸೇರಿದವರು ಮತ್ತು ಇತ್ತೀಚಿನ ಪಹಲ್ಗಾಮ್ ದಾಳಿಗೆ ಸಂಬಂಧಿಸಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ ನಂತರ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಮಾಹಿತಿ ನೀಡಿದ್ದಾರೆ.
#WATCH | J&K | Encounter between the security forces and terrorists is underway in the Akhal area of Kulgam district. SOG, J&K Police, Army and CRPF are carrying out the operation.
(Visuals deferred by unspecified time; no live operational details disclosed) pic.twitter.com/BGnx4lMKk3
— ANI (@ANI) August 2, 2025
Operation Akhal, Kulgam | Chinar Corps, Indian Army tweets, "… One terrorist has been neutralised by the security forces so far. Operation continues." https://t.co/Z2OTkxdy2D pic.twitter.com/QlwCIs0pEs
— ANI (@ANI) August 2, 2025