ನವದೆಹಲಿ: ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ದೊರೆತಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದರು.
ಕಾಂಗ್ರೆಸ್ ಸಂಸದರಾದ ಜಿ.ಕುಮಾರ ನಾಯಕ್ ಮತ್ತು ಇ.ತುಕಾರಾಂ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್ಎಸ್ವೈ) ಅಡಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 22 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಆದರೆ, ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ದೊರೆತಿಲ್ಲ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತಿದೆ