ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ನೀಡಿದ್ದು, ಅಲ್ಲದೇ 2 ರೇಪ್ ಕೇಸ್ ನಲ್ಲಿ ಒಟ್ಟು 10 ಲಕ್ಷ ದಂಡ ವಿಧಿಸಿ ತೀರ್ಪು ಪ್ರಕಟಿಸಿತು.
ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಗೂ ಸರ್ಕಾರದ ವಕೀಲರ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷದ ಜನನ ಭಟ್ ಇದೀಗ IPC ಸೆಕ್ಷನ್ 376 (2) (k) ಅಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ, ಹಾಗು IPC ಸೆಕ್ಷನ್ 376 (2) (n) ಪದೇಪದೇ ಅತ್ಯಾಚಾರ ಜೀವನಪರ್ಯಂತ ಸೆರೆವಾಸದ ಶಿಕ್ಷೆ ಪ್ರಕಟಿಸಿತು.
ಅಲ್ಲದೆ ಸಂತ್ರಸ್ತೆಗೆ 7 ಲಕ್ಷ ಪರಿಹಾರ ಕೂಡ ನೀಡುವಂತೆ ಕೋರ್ಟ್ ಸೂಚನೆ ನೀಡಿತು. ಕೋರ್ಟ್ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೆ ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಜೈಲು ಶಿಕ್ಷೆ ಆರಂಭವಾಗಲಿದೆ ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ. ಏಕೆಂದರೆ ಈ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ. ಕೇವಲ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲಾಗಿತ್ತು ಹಾಗಾಗಿ ಇಂದಿನಿಂದ ಜೈಲುವಾಸ ಆರಂಭವಾಗಲಿದೆ.