ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು ಮಾರಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಮಾಣ ಪ್ರಕಟಿಸಿತು.
ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಎಚ್ ಡಿ ದೇವೇಗೌಡ ಕುಟುಂಬಕ್ಕೆ ತೀವ್ರ ಆಘಾತ ಉಂಟಾಗಿದೆ. ದೇವೇಗೌಡರು ಇದೀಗ ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಬಹಳ ನೊಂದಿದ್ದಾರೆ. ಇತ್ತ ತಂದೆ ಎಚ್ ಡಿ ರೇವಣ್ಣ ಅವರು ಕೂಡ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ಮಾಡಿಕೊಂಡಿದ್ದು, ಈ ಕುರಿತು ತಮ್ಮ ವಕೀಲರ ಜೊತೆಗೆ ಈಗಾಗಲೇ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಜನಪ್ರತಿನಿಧಿಗಳ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು ನಿನ್ನೆಯಿಂದಲೇ ಪ್ರಜ್ವಲ್ ರೇವಣ್ಣಗೆ ಜೈಲುವಾಸ ಆರಂಭವಾಗಿದೆ.