ಶಿವಮೊಗ್ಗ: ಜಿಲ್ಲೆಯ ಹೊಸನಗರದ ಹೂವಿನಕೋಣಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದಲ್ಲಿ ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ಐದನೇ ತರಗತಿ ಬಾಲಕನೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಶಾಲೆಯಲ್ಲಿ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಪ್ರಕರಣವನ್ನು ಸಿಎಂ ಸಿದ್ಧರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದರು. ಅಲ್ಲದೇ ಪೊಲೀಸರು ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆಯ ಹಿನ್ನಲೆಯಲ್ಲಿ ತ್ವರಿತವಾಗಿ ತನಿಖೆ ನಡೆಸಿದರು. ಈ ವೇಳೆ ಐದನೇ ತರಗತಿ ವಿದ್ಯಾರ್ಥಿಯೇ ಹುಡುಗಾಟಿಕೆಗೆ ನೀರಿಗೆ ವಿಷ ಬೆರೆಸಿದ್ದಾಗಿ ಮಾಹಿತಿ ನೀಡಿದ್ದಾನೆ.