ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ನಟಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು.
ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇದೀಗ ಇಬ್ಬರು ಕಿಡಿಗೇಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
43 ಇನ್ಸ್ಟಾ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟಿ ರಮ್ಯಾ ಬಳಿ ಸೈಬರ್ ಕ್ರೈಂ ಪೊಲೀಸರು ಅಶ್ಲೀಲ ಮೆಸೇಜ್ ಅಕೌಂಟ್ ಗಳ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಪೇಜ್ ಗಳಿಂದ ಅಶ್ಲೀಲ ಮೆಸೇಜ್ ಗಳು ಬಂದಿದ್ದವು? ಯಾವ ನಂಬರ್ ಗಳಿಂದ ಬೆದರಿಕೆ ಕರೆ ಬಂದಿತ್ತು? ಯಾವ ಅಕೌಂಟ್ ಗಳಿಂದ ಅಶ್ಲೀಲ ಮೆಸೇಜುಗಳು ಬಂದಿದ್ದವು? ಎಂದು ಎಲ್ಲದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿದ್ದಾರೆ.