ನವದೆಹಲಿ: 2022 ರಲ್ಲಿ ಭಾರತ-ಚೀನಾ ಸಂಘರ್ಷದ ಸಂದರ್ಭದಲ್ಲಿ ಸೇನೆಯ ಬಗ್ಗೆ ರಾಹುಲ್ ಗಾಂಧಿ ಮಾಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಚೀನಾ ಭಾರತದ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರ ಕುರಿತು ಸುಪ್ರೀಂಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
2000 ಚದರ ಕಿ.ಮೀ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ನಿಮಗೆ ಹೇಗೆ ತಿಳಿಯುತ್ತದೆ? ವಿಶ್ವಾಸಾರ್ಹ ಮಾಹಿತಿ ಏನು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಇದನ್ನು ಹೇಳುವುದಿಲ್ಲ. ಗಡಿಯಲ್ಲಿ ಸಂಘರ್ಷ ಉಂಟಾದಾಗ… ನೀವು ಇದನ್ನೆಲ್ಲಾ ಹೇಳಬಲ್ಲಿರಾ. ನೀವು ಸಂಸತ್ತಿನಲ್ಲಿ ಏಕೆ ಪ್ರಶ್ನೆ ಕೇಳಬಾರದು?” ಎಂದು ಸುಪ್ರೀಂ ಕೋರ್ಟ್ ಕೇಳಿದೆ.
ಆದಾಗ್ಯೂ, ಪ್ರಕರಣದ ವಿಚಾರಣಾ ನ್ಯಾಯಾಲಯದ ಮುಂದೆ ಮುಂದಿನ ವಿಚಾರಣೆಗೆ ತಡೆ ನೀಡುವ ಮೂಲಕ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದೆ.