ಬೆಂಗಳೂರು : ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಗೇರಿಯಲ್ಲಿ ಈ ಘಟನೆ ನಡೆದಿದೆ. ಚಂದ್ರಹಾಸನ್ ಎಂಬಾತ ಮಹಿಳೆಯೋರ್ವರ ಮುಂದೆ ಪ್ಯಾಂಟ್ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಮಾಲ್ ಒಂದರ ವಾಚ್ ಮ್ಯಾನ್ ಆಗಿದ್ದ ಈತ ಹೆಣ್ಣು ಮಕ್ಕಳ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದನು. ಈ ವಿಚಾರವನ್ನ ಮಾರ್ಟ್ ನ ಮ್ಯಾನೇಜರ್ ಗೆ ಹೇಳಲು ಹೋದಾಗ ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಸದ್ಯ ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.