ಬೆಂಗಳೂರು: ನಾಳೆ ನಗರದಲ್ಲಿ ಮತಗಳ್ಳತನ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಕರೆಯಲಾಗಿತ್ತು. ಇದಕ್ಕೆ ಪರ್ಯಾಯವಾಗಿ ಬಿಜೆಪಿ ಕೂಡ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ಇಂತಹ ನಾಳೆಯ ಪ್ರತಿಭಟನೆಯನ್ನು ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಮುಂದೂಡಿಕೆ ಮಾಡಲಾಗಿದೆ.
ಇಂದು ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಶಿಬು ಸೊರೋನ್ ಅಕಾಲಿಕ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರಲ್ಲಿ ನಡೆಸಲು ಇದ್ದೇಶಿಸಿದ್ದಂತ ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದಿದಂ ಆಗಸ್ಟ್.8ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ರಣದೀಪ್ ಸುರ್ಜೆವಾಲಾ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5 ರ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಆಗಸ್ಟ್ 8 ಕ್ಕೆ ಮುಂದೂಡಲಾಗಿದೆ ಎಂದಿದ್ದಾರೆ.
ಮತ್ತೊಂದೆಡೆ ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೇ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮುಂದೂಡಿಕೆಯ ಹಿನ್ನಲೆಯಲ್ಲಿ, ಬಿಜೆಪಿ ಕೂಡ ನಾಳೆಯ ಪ್ರತಿಭಟನೆಯನ್ನು ಮುಂದೂಡಿಕೆ ಮಾಡಿದೆ.
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್