ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಸಾರಿಗೆ ಸಂಘಟನೆಗಳ ಜೊತೆಗೆ ಸಭೆ ನಡೆಸಲಾಯಿತು. ಈ ಸಭೆ ವಿಫಲವಾಗಿದ್ದು, ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ ಖಚಿತವಾಗಿದೆ.
ಈ ಬಗ್ಗೆ ಅನಂತ ಸುಬ್ಬಾರಾವ್ ಸುದ್ದಿಗಾರೊಂದಿಗೆ ಮಾತನಾಡಿ, ನಾಳೆ ನಾಲ್ಕು ಸಾರಿಗೆ ನಿಗಮಳ ಬಸ್ಸುಗಳು ರಸ್ತೆ ಇಳಿಯಲ್ಲ. ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡೋದಿಲ್ಲ. ಅನಿರ್ಧಿಷ್ಟಾವಧಿ ಮುಷ್ಕರವನ್ನು ನೌಕರರು ನಡೆಸಲಿದ್ದಾರೆ ಎಂದರು.
ವೇತನ ಪರಿಷ್ಕರಣೆ, ಅರಿಯರ್ಸ್ ಬಾಕಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಮನವಿ ಮಾಡಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ನೇತೃತ್ವದ ಇಂದಿನ ಸಭೆಯಲ್ಲಿ ಸಕಾರಾತ್ಮಕ ಸ್ಪಂದನೆ ನೀಡಲಾಗಿಲ್ಲ. ಈ ಹಿನ್ನಲೆಯಲ್ಲಿ ನಾಳೆ ರಾಜ್ಯಾಧ್ಯಂತ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
BREAKING: ನಾಳೆ ಬೆಂಗಳೂರಲ್ಲಿ ನಡೆಸಲು ಉದ್ದೇಶಿಸಿದ್ದ ‘ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ’ ಮುಂದೂಡಿಕೆ