ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಲ್ಲಿಸಲಾಗಿದ್ದಂತ ಪಿಐಎಲ್ ವಿಚಾರಣೆ ನಡೆಸಿದಂತ ಹೈಕೋರ್ಟ್ ಸರ್ಕಾರ, ಸಾರಿಗೆ ನಿಗಮಗಳಿಗೆ ನೋಟಿಸ್ ನೀಡಿದೆ. ಜೊತೆಗೆ ನಾಳಿನ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯೋದಿಲ್ಲ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದು, ಸಂಧಾನ ವಿಫಲವಾಗಿದೆ. ಹೀಗಾಗಿ ನಾಳೆ ಮುಷ್ಕರ ಖಚಿತಗೊಂಡಿದೆ.
ಈ ಸಭೆಯಲ್ಲಿ ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು. ಆದರೇ ಸರ್ಕಾರ ಸೂಕ್ತ ರೀತಿಯಲ್ಲಿ ಪ್ರತಿಸ್ಪಂದಿಸದ ಕಾರಣ ಆ.5ರ ನಾಳೆ ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸಲಿದ್ದಾರೆ.
ಮತ್ತೊಂದೆಡೆ ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದರು. ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯಲ್ಲಿ ಮುಷ್ಕರ ನಡೆಸುವುದರಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳಲಿದೆ. ಇದರಿಂದ ನಾಗರಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಸರ್ಕಾರ, ಸಾರಿಗೆ ನಿಗಮಗಳಿಗೆ ನೋಟಿಸ್ ನೀಡಿದೆ. ಅಲ್ಲದೇ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
BREAKING: ನಾಳೆ ರಾಜ್ಯಾಧ್ಯಂತ 4 ಸಾರಿಗೆ ನಿಗಮಗಳ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್
BREAKING : ನಾಳೆ ‘ರಾಹುಲ್ ಗಾಂಧಿ’ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನೆ ಆ.8 ಕ್ಕೆ ಮುಂದೂಡಿಕೆ