ಬೆಂಗಳೂರು: ನಾಳೆಯಿಂದ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಹೈಕೋರ್ಟ್ ಪಿಐಎಲ್ ವಿಚಾರಣೆ ನಡೆಸಿ, ನಾಳಿನ ಸಾರಿಗೆ ನೌಕರರ ಮುಷ್ಕರವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ.
ಇಂದು ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದರು. ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯಲ್ಲಿ ಮುಷ್ಕರ ನಡೆಸುವುದರಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳಲಿದೆ. ಇದರಿಂದ ನಾಗರಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಸರ್ಕಾರ, ಸಾರಿಗೆ ನಿಗಮಗಳಿಗೆ ನೋಟಿಸ್ ನೀಡಿದೆ. ಅಲ್ಲದೇ ನಾಳೆಯ ಸಾರಿಗೆ ನೌಕರರ ಮುಷ್ಕರವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ.