ಬೆಂಗಳೂರು: ರಾಜ್ಯದ ಹಾಡಿ, ಹಟ್ಟಿ, ತಾಂಡಾ, ಮಜರೆ ಗ್ರಾಮಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಇಂತಹ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕೆಲಸವನ್ನು ಸರ್ಕಾರ ಕಳೆದ ಎರಡು ವರ್ಷಗಳಿಂದ ಅಭಿಯಾನ ಮಾದರಿಯಲ್ಲಿ ಮುನ್ನಡೆಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಸಾಂಪ್ರದಾಯಿಕ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ 2017 ರಲ್ಲೇ ಅಂದಿನ ಕಾಂಗ್ರೆಸ್ ಸರ್ಕಾರ ಸೂಕ್ತ ಕಾನೂನು ರಚಿಸಿತ್ತು. ಆದರೆ, ಹಿಂದಿನ ಸರ್ಕಾರ ಈ ಕಾನೂನನ್ನು 2023 ರ ವರೆಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಿರಲ್ಲ. ಈ ಅವಧಿಯಲ್ಲಿ ಕೇವಲ 2,626 ಗ್ರಾಮಗಳನ್ನು ಮಾತ್ರ ಗುರುತಿಸಲಾಗಿತ್ತು. 1500 ಗ್ರಾಮಗಳನ್ನು ಮಾತ್ರ ಕಂದಾಯ ಗ್ರಾಮ ಎಂದು ಘೋಷಿಸಲಾಗಿತ್ತು. 2023ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಹತೆ ಇದ್ದಾಗ್ಯೂ ಬಿಟ್ಟುಹೋಗಿದ್ದ 4,250 ಅರ್ಹ ದಾಖಲೆ ರಹಿತ ಜನ ವಸತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಡಿಸೆಂಬರ್ ತಿಂಗಳ ಒಳಗೆ ಇಷ್ಟೂ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಸೂಚಿಸಲಾಗಿದೆ ಎಂದರು.
ಈಗಾಗಲೇ ಕಳೆದ ಮೇ ತಿಂಗಳಲ್ಲಿ ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1.11 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ 1.62 ಲಕ್ಷ ಕುಟುಂಬದ ಫಲಾನುಭವಿಗಳಿಗೆ ಇ-ಖಾತಾ- ನೋಂದಣಿ ಮಾಡಿಸಿದ ಪಕ್ಕಾ ಹಕ್ಕುಪತ್ರ ನೀಡುವ ಗುರಿಯನ್ನು ನವೆಂಬರ್ ತಿಂಗಳ ಅಂತ್ಯದೊಳಗೆ ಯಶಸ್ವಿಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗುರಿ ನೀಡಲಾಗಿದೆ” ಎಂದು ತಿಳಿಸಿದರು.
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್
BREAKING: ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಪೊಲೀಸರಿಗೆ ದೂರು ಕೊಟ್ಟ ಮತ್ತೊಬ್ಬ ದೂರುದಾರ
BREAKING: ನಾಳೆ ಬೆಳಗ್ಗೆ 6ರಿಂದಲೇ ರಾಜ್ಯಾಧ್ಯಂತ ಸಾರಿಗೆ ನೌಕರರ ಮುಷ್ಕರ, ಯಾವುದೇ ಬಸ್ ಓಡಲ್ಲ: ಅನಂತ ಸುಬ್ಬರಾವ್