ಬೆಂಗಳೂರು: 2026ನೇ ಸಾಲಿಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿ, ಇತರೆ ಸಿಬ್ಬಂದಿಗಳ ವರ್ಗಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ 2025ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳ ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮಗಳು, 2025ರಡಿ ಸಮಾಲೋಚನೆ ಮೂಲಕ ಕೈಗೊಳ್ಳಲಾಗಿರುತ್ತದೆ. ಇಲಾಖೆಯಲ್ಲಿ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದಲ್ಲಿ ಅನೇಕ ವರ್ಗದ ಅಧಿಕಾರಿ/ನೌಕರರು ಸೇವೆ ಸಲ್ಲಿಸುತ್ತಿದ್ದು, ಮುಂಬರುವ 2026ನೇ ಸಾಲಿನ ವರ್ಗಾವಣೆಗೆ ಸಂಬಂಧಿಸಿದಂತೆ, ಕೌನ್ಸಿಲಿಂಗ್ ವರ್ಗಾವಣಾ ನಿಯಮಾವಳಿಯ ನಿಯಮ- 6(1) ಮತ್ತು 6(3) ರಡಿಯ ಅಧಿಕಾರಿ/ನೌಕರರ ಸೇವಾ ವಿವರಗಳನ್ನು ಸಂಬಂಧಿಸಿದ ಜಿಲ್ಲಾ ಆರೋಗ್ಯ ಮತ್ತು పెటుంబ ಕಲ್ಯಾಣಾಧಿಕಾರಿಗಳಿಂದ ಕಲೆಹಾಕಲು ಕಾಲಾವಕಾಶ ಬೇಕಾಗುತ್ತದೆ.
ಆದುದರಿಂದ ಮುಂದಿನ ಸಾಲಿನ ವರ್ಗಾವಣೆ ಪ್ರಕ್ರಿಯೆ ಪೂರ್ವಸಿದ್ಧತೆಗಾಗಿ ಎಲ್ಲಾ ವೃಂದದ ಅಧಿಕಾರಿ/ನೌಕರರ ಸೇವಾ ವಿವರವನ್ನು ಸಂಬಂಧಿಸಿದ ಕ್ಷೇತ್ರೀಯ/ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಮುಂಗಡವಾಗಿ ಕಲೆಹಾಕಲು ಅನುವಾಗುವಂತೆ ವೇಳಾ ಪಟ್ಟಿಯನ್ನು ಪ್ರಕಟಿಸಲು ಪ್ರಸ್ತಾಪಿಸಲಾಗಿದೆ. ಅದರಂತ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಈ ಕೆಳಕಂಡಂತೆ ಆದೇಶಿಸಿದೆ.
ಪುಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, 2026ನೇ ಸಾಲಿಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಯನ್ನು ‘ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳ ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮಗಳು, 2025’ ರಡಿ ಸಮಾಲೋಚನೆ ಮೂಲಕ ನಿಗದಿತ ಕಾಲಾವಧಿಯೊಳಗಾಗಿ ಪೂರ್ಣಗೊಳಿಸಲು ಅನುವಾಗುವಂತೆ ಪೂರ್ವಸಿದ್ಧತೆಗಾಗಿ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ದಿನಾಂಕ : 31/12/2025 ರಂದು ಇದ್ದಂತಹ ಸೇವಾ ಮಾಹಿತಿಯನ್ನು ಆಯಾಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ಕಲೆಹಾಕಲು ಹಾಗೂ ವರ್ಗಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ಈ ಕೆಳಕಂಡ ವೇಳಾ ಪಟ್ಟಿಯನ್ನು ನಿಗದಿಪಡಿಸಿ ಆದೇಶಿಸಿದ್ದಾರೆ.
BREAKING: ನಾಳೆ ರಸ್ತೆಗೆ ಇಳಿಯೋದಿಲ್ಲ ಸರ್ಕಾರಿ ಬಸ್: ಬೆಳಗ್ಗೆ 6 ಗಂಟೆಯಿಂದೇ ರಾಜ್ಯಾಧ್ಯಂತ ಸಾರಿಗೆ ಮುಷ್ಕರ
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್