ನವದೆಹಲಿ: ರಷ್ಯಾದ ತೈಲ ಖರೀದಿ ಮತ್ತು ಮಾರಾಟಕ್ಕೆ ಪ್ರತಿಯಾಗಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿದ್ದಾರೆ.
ಟ್ರಂಪ್ ಈ ಹಿಂದೆ ಭಾರತದ ಮೇಲೆ 25% ಸುಂಕ ಮತ್ತು ದಂಡವನ್ನು ವಿಧಿಸಿದ್ದರು. ಇದರಿಂದಾಗಿ ಶೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲವಾಗಿದ್ದರೇ, ವಿದೇಶಿ ಕಂಪನಿಗಳು ಭಾರತಕ್ಕೆ ತಮ್ಮ ಸರಬರಾಜು ಸ್ಥಗಿತಗೊಳಿಸೋದಕ್ಕೂ ಮುಂದಾಗಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಅಂತಹ ಕಂಪನಿಗಳ ಜೊತೆಗೆ ಮಾತುಕತೆಯನ್ನು ಕೂಡ ನಡೆಸಲಾಗಿತ್ತು.
ಈ ಬೆನ್ನಲ್ಲೇ ರಷ್ಯಾದ ತೈಲ ಖರೀದಿ ಮತ್ತು ಮಾರಾಟಕ್ಕೆ ಪ್ರತಿಯಾಗಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿ, ಮತ್ತೊಂದು ಶಾಕ್ ಅನ್ನು ಭಾರತಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.
ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಭಾರತವು ಬೃಹತ್ ಪ್ರಮಾಣದಲ್ಲಿ ರಷ್ಯಾದ ತೈಲವನ್ನು ಖರೀದಿಸುವುದಲ್ಲದೆ, ಮುಕ್ತ ಮಾರುಕಟ್ಟೆಗಳಲ್ಲಿ ದೊಡ್ಡ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ ಎಂದು ಹೇಳಿದ್ದಾರೆ. “ರಷ್ಯಾದ ಯುದ್ಧ ಯಂತ್ರ”ದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದರ ಬಗ್ಗೆ ಭಾರತವು ಕಾಳಜಿ ವಹಿಸುವುದಿಲ್ಲ ಎಂದು ಅವರು ಹೇಳಿದರು.
“ಭಾರತವು ಬೃಹತ್ ಪ್ರಮಾಣದಲ್ಲಿ ರಷ್ಯಾದ ತೈಲವನ್ನು ಖರೀದಿಸುತ್ತಿದೆ, ಆದರೆ ಅವರು ಖರೀದಿಸಿದ ಹೆಚ್ಚಿನ ತೈಲಕ್ಕಾಗಿ, ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ಲಾಭಕ್ಕಾಗಿ ಅದನ್ನು ಮಾರಾಟ ಮಾಡುತ್ತಿದ್ದಾರೆ. ರಷ್ಯಾದ ಯುದ್ಧ ಯಂತ್ರದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದು ಅವರಿಗೆ ಕಾಳಜಿಯಿಲ್ಲ. ಈ ಕಾರಣದಿಂದಾಗಿ, ಭಾರತವು ಯುಎಸ್ಎಗೆ ಪಾವತಿಸುವ ಸುಂಕವನ್ನು ನಾನು ಗಣನೀಯವಾಗಿ ಹೆಚ್ಚಿಸುತ್ತೇನೆ. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು!!!” ಎಂದು ಅವರು ಬರೆದಿದ್ದಾರೆ.
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್
BREAKING: 2026ನೇ ಸಾಲಿನ ರಾಜ್ಯದ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ