ಬೆಂಗಳೂರು: ಸಾರಿಗೆ ಸಂಸ್ಥೆಗಳು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಎಂಡಿ ಮನವಿ ಮಾಡಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕೆ ಎಸ್ ಆರ್ ಟಿ ಸಿ ಎಂಡಿ ಅಕ್ರಂ ಪಾಷಾ ಅವರು ಆತ್ಮೀಯ ನೌಕರ ಬಾಂಧವರೇ, ಮಾನ್ಯ ಉಚ್ಛ ನ್ಯಾಯಾಲಯವು ನಾಳಿನ ( ದಿನಾಂಕ: 05-08-2025ರ) ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ, ಮಾನ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಹಾಗೂ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಿದ್ದಾರೆ.
ಇನ್ನೂ ಬಿಎಂಟಿಸಿ ಎಂಡಿ ರಾಮಚಂದ್ರನ್.ಆರ್ ಅವರು, ಮಾನ್ಯ ಉಚ್ಛ ನ್ಯಾಯಾಲಯವು ನಾಳಿನ ( ದಿನಾಂಕ: 05-08-2025ರ) ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ, ಮಾನ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಹಾಗೂ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಿದ್ದಾರೆ.
BREAKING : ನಾಳೆ ‘ರಾಹುಲ್ ಗಾಂಧಿ’ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನೆ ಆ.8 ಕ್ಕೆ ಮುಂದೂಡಿಕೆ
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್