ಬೆಂಗಳೂರು : ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ನೌಕರರು ನಾಳೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ. ಆದರೆ ನಿನ್ನೆ ಎಂದಿನಂತೆ ಬಸ್ ಸೇವೆ ಇತ್ತು. ಆದರೆ ಇಂದು ಬೆಳಗ್ಗೆ 6 ಗಂಟೆಯಿಂದ ಬಸ್ ಸೇವೆ ಸ್ಥಗಿತಗೊಳ್ಳಲಿದೆ.
ಸಾರಿಗೆ ನೌಕರರ ಮುಖಂಡ ಮಂಜುನಾಥ್ ಹೈಕೋರ್ಟ್ ನೀಡಿದ ತಡೆಯಾಜ್ಞೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಾರಿಗೆ ನೌಕರರು ಹಲವು ದಿನಗಳ ಗಡುವು ನೀಡಿ ಇದೀಗ ಕೊನೆಯ ಅಸ್ತ್ರವಾಗಿ ಮುಷ್ಕರ ಘೋಷಿಸಲಾಗಿದೆ. ಇದೀಗ ವಾಪಸ್ ಪಡೆಯಲು ಸಾಧ್ಯವಿಲ್ಲ. ಜಂಟಿ ಕ್ರಿಯಾ ಸಮಿತಿಗೆ ಮುಂಚಿತವಾಗಿ ಕೋರ್ಟ್ ನೋಟೀಸ್ ಕೊಡಬೇಕಿತ್ತು. ನಮ್ಮ ಅಭಿಪ್ರಾಯವನ್ನು ಕೋರ್ಟ್ ಆಲಿಸಬೇಕಿತ್ತು.
ಆದರೆ ಇಲ್ಲಿ ಕೋರ್ಟ್ ನಮ್ಮ ಅಭಿಪ್ರಾಯವೇ ಕೇಳಿಲ್ಲ. ದಿಢೀರ್ ತಡೆಯಾಜ್ಞೆ ನೀಡಿದರೆ ಮುಷ್ಕರ ವಾಪಸ್ ಪಡೆಯುಲ ಸಾಧ್ಯವಿಲ್ಲ ಎಂದು ಮಂಜನಾಥ್ ಹೇಳಿದ್ದಾರೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಮುಷ್ಕರ ಆರಂಭಗೊಳ್ಳಲಿದೆ. ನೌಕರರು ಭಯ ಬೀಳುವ ಅಗತ್ಯ ಇಲ್ಲ. ಕೋರ್ಟ್ ಗೆ ನಾವು ಮನವಿ ಮಾಡಿಕೊಳ್ಳುತ್ತೇವೆ ಎಂದು ಮಂಜುನಾಥ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನೌಕರರಿಗೆ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮನವಿ ಮಾಡಿದ್ದಾರೆ. ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಕೆಎಸ್ಆರ್‌ಟಿಸಿ ಸಾರ್ವಜನಿಕರ ಅಗತ್ಯ ಸೇವಾ ಸಂಸ್ಥೆಯಾಗಿದೆ. ಹೀಗಾಗಿ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳದೆ ಕರ್ತವ್ಯಕ್ಕೆ ಹಾಜರಾಗಲು ಮನವಿ ಮಾಡಿದ್ದಾರೆ.