ಕೊಪ್ಪಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ಆರಂಭಿಸಿದ್ದಾರೆ. ಮತ್ತೊಂದೆಡೆ ಕೆಎಸ್‍ಆರ್‌ಟಿಸಿ ಬಸ್‍ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ಕುಕನೂರ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ.
ಬಸ್ ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಮಸಬಹಂಚಿನಾಳ ಬಳಿ ತಲುಪಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಬಸ್‍ನ ಗಾಜು ಪುಡಿಪುಡಿಯಾಗಿದೆ.
ಕಲ್ಲು ತೂರಾಟದ ಬಳಿಕ ಬಸ್‍ನ್ನು ಚಾಲಕ ವಾಪಸ್ ಡಿಪೋಗೆ ಕೊಂಡೊಯ್ದಿದ್ದಾರೆ. ಇದರಿಂದ ಪ್ರಯಾಣಿಕರು ರಾತ್ರಿ ವೇಳೆ ಪರದಾಡುವಂತಾಯಿತು. ಇನ್ನು ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನರು ಊರಿಗೆ ತೆರಳಲು ಪರದಾಡಿದರು.