ಆಂಧ್ರಪ್ರದೇಶ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸಲ ನನಗೆ ರಾಖಿ ಕಟ್ಟೋಕೆ ಆಗಲ್ಲ, ಕ್ಷಮಿಸಿಬಿಡು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಶ್ರೀವಿದ್ಯಾ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕಾಲೇಜು ಉಪನ್ಯಾಸಕಿಯಾಗಿದ್ದರು. ಆರು ತಿಂಗಳ ಹಿಂದಷ್ಟೇ ರಾಂಬಾಬು ಎಂಬುವವರನ್ನು ಮದುವೆಯಾಗಿದ್ದರು.
ಮದುವೆಯಾಗಿ ತಿಂಗಳಿನಿಂದಲೇ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಶ್ರೀವಿದ್ಯಾ ಪತ್ರದಲ್ಲಿ ಬರೆದಿದ್ದಾರೆ. ರಾಂಬಾಬು ಕುಡಿದು ಮನೆಗೆ ಬರುತ್ತಿದ್ದ. ದೈಹಿಕ ಹಿಂಸೆ ನೀಡುತ್ತಿದ್ದ, ಮಾತಿನಲ್ಲಿ ನಿಂದಿಸುತ್ತಿದ್ದ. ತನ್ನನ್ನು ಅಪಹಾಸ್ಯ ಮಾಡುತ್ತಿದ್ದ. ಬೇರೆ ಮಹಿಳೆಯರ ಮುಂದೆ ತನ್ನನ್ನು ನಿಷ್ಪ್ರಯೋಜಕ ಎಂದು ಕರೆಯುತ್ತಿದ್ದ ಎಂದು ಆಕೆ ಬರೆದಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಮಹಿಳೆ ಈ ತಪ್ಪು ಹೆಜ್ಜೆ ಇಡಬೇಕಾಯಿತು.