ಕೋಲಾರ : ವೇತನ ಹೆಚ್ಚಳ ಸೇರದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ, ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಗಳು ಇದುವರೆಗೂ ರಸ್ತೆಗೆ ಇಳಿದಿಲ್ಲ. ಆದರೆ ಕೆಲವು ಭಾಗಗಳಲ್ಲಿ ಮಾತ್ರ ಕೆಲವು ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಳ್ಳದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಇದೀಗ ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ವರದಿಯಾಗಿದೆ
ಹೌದು ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಈಗ ಒಂದೆರಡು ಬಸ್ ಗಳನ್ನು ನಿಲ್ದಾಣಕ್ಕೆ ಅಧಿಕಾರಿಗಳು ಕಳುಹಿಸಿದ್ದಾರೆ. ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕೋಲಾರದಲ್ಲಿ ಕೆಎಸ್ಆರ್ಟಿಸಿ ಬಸ್ಸಿನ ಕಿಟಕಿ ಗಾಜು ಪುಡಿಪುಡಿ ಆಗಿವೆ.