ಕೊಪ್ಪಳ / ತುಮಕೂರು : ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು, ಇದರಿಂದ ಇಡೀ ರಾಜ್ಯದ ಜನತೆಗೆ ದೊಡ್ ಹೊಡೆತ ಬಿದ್ದಿದೆ. ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಪರದಾಟ ನಡೆಸುತ್ತಿದ್ದರು. ಇದೀಗ ತುಮಕೂರು ಮತ್ತು ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಹೌದು ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾಲಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮುಂದೂಡಿದೆ. ಸ್ನಾತಕ ಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆಯನ್ನು ವಿಶ್ವವಿದ್ಯಾಲಯ ಮುಂದೂಡಿದೆ. ಅದೇ ರೀತಿಯಾಗಿ ಕೊಪ್ಪಳ ವಿಶ್ವವಿದ್ಯಾಲಯ ಕೂಡ ಸ್ನಾತ್ತಕೋತ್ತರ ಪರೀಕ್ಷೆ ಮುಂದೂಡಿದೆ.
ಈ ಕುರಿತು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಬಿಕೆ ರವಿ ಮಾಹಿತಿ ನೀಡಿದ್ದು ಪರೀಕ್ಷೆ ಮುಂದುವಂತೆ ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆ ನೋಡಲಾಗಿದೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ನಲ್ಲಿ ಇರುವ ವಿಶ್ವವಿದ್ಯಾಲಯದಲ್ಲಿ ಸ್ನಾತ್ತಕೋತ್ತರ ಪರೀಕ್ಷೆ ಮುಂದೂಡಿದ್ದು, ಪರೀಕ್ಷಾ ದಿನಾಂಕ ಶೀಘ್ರ ತಿಳಿಸುವುದಾಗಿ ಬಿಕೆ ರವಿ ಮಾಹಿತಿ ನೀಡಿದ್ದಾರೆ.