ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ತಾರಕಕ್ಕೇರಿದೆ. ಇದರ ನಡುವೆ ಮುಷ್ಕರದ ನಡುವೆಯೂ ಕಾರ್ಯಾಚರಣೆಯಲ್ಲಿ ತೊಡಗಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ಸುಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.
ಕೋಲಾರ, ಕೊಪ್ಪಳದಲ್ಲಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರು. ಅವರಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಲಾಗಿತ್ತು.
ಇದರಿಂದ ಸಿಟ್ಟುಗೊಂಡಂತ ಕೆಲ ದುಷ್ಕರ್ಮಿಗಳು ಕೋಲಾರದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಬಸ್ ಗ್ಲಾಸ್ ಪುಡಿ ಪುಡಿಯಾಗಿದೆ.
ಮತ್ತೊಂದೆಡೆ ಕೊಪ್ಪಳದಲ್ಲೂ ಸಾರಿಗೆ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸಿನ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಬಸ್ ಗಾಜು ಪುಡಿಯಾಗಿರುವುದಾಗಿ ಹೇಳಲಾಗುತ್ತಿದೆ. ಈ ಬಸ್ಸು ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿತ್ತು.