ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಸಿಹಿಸುದ್ದಿ ನೀಡಿದ್ದು, 2024-25 ನೇ ಸಾಲಿನಲ್ಲಿ ಕೇಂದ್ರ ತೆರಿಗೆಗಳು ಮತ್ತು ಸುಂಕಗಳಲ್ಲಿ ರಾಜ್ಯಕ್ಕೆ ಬರಬೇಕಿದ್ದ 46,933 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
2022-23 ನೇ ಸಾಲಿನಲ್ಲಿ 34,596 ಕೋಟಿ ರೂ., 2023-24 ರಲ್ಲಿ 41,193 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಸಂಸ್ಥೆಗಳು, ವಿಪತ್ತು ನಿರ್ವಹಣೆ ಮತ್ತು ಆರೋಗ್ಯ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಕ್ರಮವಾಗಿ 5426 ಕೋಟಿ ರೂ., 3532 ಕೋಟಿ ರೂ., ಹಾಗೂ 6826 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಸಭೆಯಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಉತ್ತರಿಸಿದ್ದಾರೆ.