ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ರಭಸವಾಗಿ ಹರಿಯುವ ಹಳ್ಳದ ನೀರಿನಲ್ಲಿ ಬೈಕ್ ಸವಾರ ಒಬ್ಬ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ತಾಲೂಕಿನ ತಾರೀಹಾಳ ಗ್ರಾಮದ ಹೊರವಲಯದಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ಸಮೇತ ನೀರಿನಲ್ಲಿ ಪಂಚಾಯಿತಿ ಸಿಬ್ಬಂದಿ ಕೊಚ್ಚಿಕೊಂಡು ಹೋಗಿದ್ದಾರೆ.
ತಾರಿಹಾಳ ಗ್ರಾಮದ ಸುರೇಶ್ ಗುಂಡನವರ್ (50) ನಾಪತ್ತೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಈ ಒಂದು ದುರಂತ ಸಂಭವಿಸಿದೆ ನಪತ್ಯಾದ ಸುರೇಶ್ ಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.