ಬೆಂಗಳೂರು : 2022 ರಲ್ಲಿ ನಡೆದಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ.
ಮಂಗಳೂರು ನಗರದಲ್ಲಿ 2022ರಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್ನ ಅಸಲಿ ಟಾರ್ಗೆಟ್ ಧರ್ಮಸ್ಥಳದ ದೇಗುಲ ಆಗಿತ್ತೆಂಬ ಸ್ಫೋಟಕ ಸಂಗತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆಯಲ್ಲಿ ಬಯಲು ಮಾಡಿದೆ.
ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್ ಟೈಮರ್ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್ಗೆ ನಿಗದಿ ಮಾಡಿದ್ದ ಪರಿಣಾಮ ಅದು ಮಾರ್ಗ ಮಧ್ಯೆಯೇ ಆಟೋರಿಕ್ಷಾದೊಳಗೆ ಸ್ಫೋಟವಾಗಿತ್ತು.