ಬೆಂಗಳೂರು: ಶೇಕಡ 17ರಷ್ಟು ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಪ್ರವರ್ಗವಾರು ವಿಂಗಡಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ ಆ. 16ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳನ್ನು ಐದು ಪ್ರವರ್ಗಗಳಾಗಿ ವಿಂಗಡಿಸಿ ಎಸ್ಸಿಗೆ ಮೀಸಲಾಗಿರುವ ಶೇಕಡ 17ರಷ್ಟು ಮೀಸಲಾತಿಯನ್ನು ಪ್ರವರ್ಗವಾರು ವಿಂಗಡಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ವರದಿ ನೀಡಿದೆ. ಪ್ರವರ್ಗ ಎ ಶೇಕಡ 1ರಷ್ಟು ಮೀಸಲಾತಿ ನೀಡಿಲಾಗಿದ್ದು, ಅತ್ಯಂತ ಹಿಂದುಳಿದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ 59 ಸಣ್ಣ ಪುಟ್ಟ ಸಮುದಾಯಗಳಿವೆ. ಪ್ರವರ್ಗ ಬಿ ನಲ್ಲಿ ಹೆಚ್ಚು ಹಿಂದುಳಿದ ಮಾದಿಗ ಮತ್ತು ಅದೇ ರೀತಿ ಸಾಮಾಜಿಕ ಆರ್ಥಿಕ ರಾಜಕೀಯ ಸ್ಥಿತಿ ಇರುವ 18 ಸಮುದಾಯಗಳಿದ್ದು, ಶೇಕಡ 6ರಷ್ಟು ಮೀಸಲಾತಿ ನೀಡಲಾಗಿದೆ.
ಪ್ರವರ್ಗ ಸಿ ಯಲ್ಲಿ ಹಿಂದುಳಿದ ಹೊಲಯ ಮತ್ತು ಅದೇ ರೀತಿಯ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಸ್ಥಿತಿ ಇರುವ 17 ಜಾತಿಗಳಿಗೆ ಶೇಕಡ 5ರಷ್ಟು ಮೀಸಲಾತಿ ನೀಡಲಾಗಿದೆ. ಪ್ರವರ್ಗ ಡಿ ನಲ್ಲಿ ಕಡಿಮೆ ಹಿಂದುಳಿದ ಲಂಬಾಣಿ, ಭೋವಿ, ಕೊರಮ, ಕೊರಚ ಸಮುದಾಯಗಳಿದ್ದು, ಶೇ. 4 ಮೀಸಲಾತಿ ನೀಡಲಾಗಿದೆ
ಪ್ರವರ್ಗ ಇ ನಲ್ಲಿ ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರಗಳಿಗೆ ಶೇ. 1ರಷ್ಟು ಮೀಸಲಾತಿ ನೀಡಲಾಗಿದೆ. ಪಟ್ಟಿಯಲ್ಲಿ ಗುರುತಿಸಿಕೊಳ್ಳದ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಜಾತಿ ಪಟ್ಟಿಯಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಯೋಗ ಶಿಫಾರಸು ಮಾಡಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು; ಹಾಗೂ ನ್ಯಾ.ನಾಗಮೋಹನ್ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬAಧಿಸಿದAತೆ, ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು; ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು.