ಹಾವೇರಿ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ತಾಲೂಕಿನ ನಜೀಕ ಲಕಮಾಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಲಲಿತವ್ವ (55) ಕೊಂದು ಬಳಿಕ ಪತಿ ಸಿದ್ದಪ್ಪ ಡಬ್ಬಣ್ಣವರ (60) ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿನ್ನೆ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ಅಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಲಲಿತವ್ವ ಹತ್ಯೆ ಮಾಡಿ ಬಳಿಕ ಸಿದ್ದಪ್ಪ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.