ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶದಲ್ಲಿ ಗೊಂದಲ ಉಂಟಾಗಿದ್ದು, ನಿನ್ನೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದೀಗ ಎಂದು ಈ ಒಂದು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಹೌದು ನಿನ್ನೆ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿತ್ತು. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ರಹೀಮ್ ಖಾನ್ ನೇಮಕ ಆದೇಶವನ್ನು ಹಿಂಪಡೆದಿದೆ ರಹೀಮ್ ಖಾನ್ ಅವರನ್ನು ಕೇವಲ ಸ್ವಾತಂತ್ರ್ಯ ಧ್ವಜಾರೋಹಣಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಸಚಿವ ಜಮೀರ್ ಖಾನ್ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.