ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ 80 ಕ್ಷೇತ್ರಗಳಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅನೇಕ ವಿಚಾರ ಹೇಳಿದ್ದಾರೆ. ಕೇವಲ ರಾಜಕಾರಣಿಯಾಗಿ ಮಾಡುತ್ತಿರುವ ಆಪಾದನೆ ಅಲ್ಲ. ಸಂಪೂರ್ಣವಾಗಿ ಅಧ್ಯಯನ ಮಾಡಿ ಸಾಕ್ಷಾಧಾರ ಬಿಡುಗಡೆ ಮಾಡಿದ್ದಾರೆ. ಪ್ರತಿಭಟನಾ ರ್ಯಾಲಿ ಕರ್ನಾಟಕದ ಬೆಂಗಳೂರಿನಿಂದ ಪ್ರಾರಂಭ ಆಗಿದೆ. ಸಂಪೂರ್ಣವಾಗಿ ಅಧ್ಯಯನ ಮಾಡಿ ರಾಹುಲ್ ಗಾಂಧಿ ಈ ಸತ್ಯ ಬಯಲು ಮಾಡಿದ್ದಾರೆ.ಶ್ರೀಮಂತರಾಗಲಿ ಬಡವರಾಗಲಿ ಒಬ್ಬ ವ್ಯಕ್ತಿಗೆ ಒಂದೇ ಮತ ಎಂದು ತಿಳಿಸಿದರು.
ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅಧ್ಯಯನ ಮಾಡಿದ್ದಾರೆ. ಚುನಾವಣಾ ಆಯೋಗ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ದೇಶದ ಪ್ರತಿಯೊಬ್ಬ ಪ್ರಜೆಗೂ ಮತ್ತಾನದ ಹಕ್ಕು ಕೊಟ್ಟಿದ್ದು ಸಂವಿಧಾನ. ಭಾರತೀಯ ಜನತಾ ಪಕ್ಷದವರು ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. 2018 ರಲ್ಲಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಿಜೆಪಿಯವರು ಬಂದರು. ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನಕ್ಕೆ ಪ್ರಯತ್ನ ಮಾಡಿದ್ದಾರೆ. ಆತರಿಕ್ಷ ಸಮೀಕ್ಷೆ ನಡೆಸಿದಾಗ ಹಲವು ಸ್ಥಾನ ಗೆಲ್ಲ ಬೇಕಾಗಿತ್ತು ಎಂದರು.
ಮನುವಾದಿ ಬಿಜೆಪಿಯವರು ಮತದಾನ ಹಕ್ಕು ಕಸಿಯುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನ ನಡೆದಿದೆ ಪ್ರಧಾನಿ ಮೋದಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿಲ್ಲ. 80 ಕ್ಷೇತ್ರಗಳಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿರುವುದು. ಬಿಜೆಪಿ ಮತ ಕದಿಯೋ ಮೂಲಕ ಅಧಿಕಾರಿಕೆ ಬಂದಿದೆ. ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ್ದಾರೆ. ಇವಿಎಂ ಜಾರಿಗೆ ತಂದ ಮೇಲೆ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.