ನವದೆಹಲಿ: ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಸಚಿವರು ಚುನಾವಣಾ ಆಯೋಗದ ಗಮನ ಸೆಳೆದಿದ್ದಾರೆ.
ಮತಗಳ್ಳತನ ಎಂಬುದು ಕೆಲವರ ಕಪಟ ಕಥೆ ಎಂದು ಟೀಕಿಸಿರುವ ಸಚಿವರು; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಆಯೋಗಕ್ಕೆ ಸಲಹೆ ಮಾಡಿದ್ದಾರೆ.
ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೊಬೆಲ್ ರಾಜಕಾರಣವಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.
ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
SHOCKING : ರಾಜಸ್ಥಾನದಲ್ಲಿ `ರಾಕ್ಷಸಿ ಕೃತ್ಯ’ : ಬೀದಿ ನಾಯಿಗಳನ್ನು ಬೆನ್ನಟ್ಟಿ ಗುಂಡು ಹಾರಿಸಿ ಬರ್ಬರ ಹತ್ಯೆ.!