ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳು:
ಸ್ವಯಂ ಉದ್ಯೋಗ ನೇರಸಾಲ ಯೋಜನೆ ಕಿರು ಆರ್ಥಿಕ ಚಟುವಟಿಕೆ, ಸ್ವಯಂ ಉದ್ಯೋಗ ನೇರಸಾಲ ಕುರಿಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ( ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಗಂಗಾಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗಾಗಿ ಸೇವಾ-ಸಿಂಧು ಪೋರ್ಟಲ್‌ನ https://sevasindhu.karnataka.gov.in ಲಿಂಕ್ ಮೂಲಕ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕರ ಶಾಲೆಯ ಎದುರುಗಡೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾವಲಂಬಿ ಸಾರಥಿ ಯೋಜನೆ
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
ಡ್ರೈವಿಂಗ್ ಲೈಸೆನ್ಸ್
ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ
ಮೊಬೈಲ್ ನಂಬರ್
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.