ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮತ್ತು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಉದ್ಯಾನ ನಗರಿ ನಾಳೆ ಪ್ರಮುಖ ಸಂಚಾರ ತಿರುವುಗಳು ಮತ್ತು ಪಾರ್ಕಿಂಗ್ ನಿಷೇಧವನ್ನು ಎದುರಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಸಂಚಾರ ನಿರ್ಬಂಧಗಳನ್ನು ಘೋಷಿಸಿದ್ದಾರೆ.
ಬೆಳಗ್ಗೆ 8.30ರಿಂದ ಮಧ್ಯಾಹ್ನ 12ರವರೆಗೆ ಮಾರೇನಹಳ್ಳಿ ಮುಖ್ಯರಸ್ತೆ (ರಾಜಲಕ್ಷ್ಮಿ ಜಂಕ್ಷನ್ ನಿಂದ ಮಾರೇನಹಳ್ಳಿ 18ನೇ ಮುಖ್ಯರಸ್ತೆ), ಮಾರೇನಹಳ್ಳಿ ಈಸ್ಟ್ ಎಂಡ್ ಮುಖ್ಯರಸ್ತೆ ಜಂಕ್ಷನ್ ನಿಂದ ಅರವಿಂದ್ ಜಂಕ್ಷನ್ ವರೆಗೆ.
ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಹೊಸೂರು ರಸ್ತೆ ಮೂಲಕ ಹೊಸೂರಿಗೆ, ಹೊಸೂರಿನಿಂದ ಬೆಂಗಳೂರು ನಗರಕ್ಕೆ.
ಎಲೆಕ್ಟ್ರಾನಿಕ್ ಸಿಟಿ ಹಂತ 1 ರ ರಸ್ತೆಗಳಾದ ಇನ್ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆ ಮತ್ತು ಎಚ್ಪಿ ಅವೆನ್ಯೂ ರಸ್ತೆಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿಯ ಪ್ರಕಾರ, ಪ್ರಧಾನಿ ಮೋದಿ ಸುಮಾರು ನಾಲ್ಕು ಗಂಟೆಗಳ ಕಾಲ ಬೆಂಗಳೂರಿನಲ್ಲಿದ್ದು, ಮೂರು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ: