ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ನಡೆದಿದ್ದು, ಭಾರಿ ಗಾಳಿ ಮಳೆಗೆ ಮರವೊಂದು ರಸ್ತೆಗೆ ಬಿದ್ದಿದೆ. ಈ ವೇಳೆ ವೇಗವಾಗಿ ಬಂದಂತಹ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವಾರನ ಪತ್ನಿ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೋಲಾರ ತಾಲೂಕಿನ ತಲಗುಂದ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮೃತರನ್ನು ಕರೆನಹಳ್ಳಿ ಗ್ರಾಮದ ನಿವಾಸಿ ಸುಬ್ರಮಣಿ (34) ಎಂದು ತಿಳಿದುಬಂದಿದೆ. ದಂಪತಿಗಳು ಬೈಕ್ ಮೇಲೆ ಮುಳಬಾಗಿಲು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ವೇಮುಗಲ್ ನಿಂದ ಕೋಲಾರ ಮೂಲಕ ಬೈಕ್ ನಲ್ಲಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ರಸ್ತೆ ಅಡ್ಡಲಾಗಿ ಮರ ಬಿದ್ದಿತ್ತು. ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಬೈಕ್ ಸವಾರ ಸುಬ್ರಮಣಿ ಸವಣ್ಣಪ್ಪಿದ್ದಾರೆ. ವೇಮುಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.