ಬೆಂಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅದೇ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪ್ರಥಮ-1 ಪರೀಕ್ಷೆಯಲ್ಲಿ ಖಾಸಗಿ ಅನುದಾವಿತ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ, ವಿದ್ಯಾರ್ಥಿಗಳ ಶೇಕಡಾವಾರು ಫಲಿತಾಂಶ ಕಡಿಮೆಯಾಗಿದ್ದ ಹಿನ್ನಲೆಯಲ್ಲಿ ಈ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಸುಧಾರಣೆ ಹಾಗೂ ಫಲಿತಾಂಶ ಸುಧಾರಣೆಗೆ ಕೈಗೊಳ್ಳುವ ನಿಟ್ಟಿನಲ್ಲಿ ಶಾಲೆಗಳು ಮತ್ತು ಶಿಕ್ಷಕರುಗಳು, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಎಚ್ಚರಿಕೆಯನ್ನು ನೀಡುವ ದೃಷ್ಟಿಯಿಂದ ಪರಿಶೀಲಿಸಿ ಸಂಬಂಧಪಟ್ಟ, ಶಿಕ್ಷಕರುಗಳ ಹಾಗೂ ಶಾಲೆಗಳ ಮೇಲೆ ನಿಯಮಾನುಸಾರ ಆಗತ್ಯ ಕ್ರಮಕೈಗೊಳ್ಳುವುದು. ಹಾಗೂ ಕೈಗೊಂಡ ಕ್ರಮಗಳ ವರದಿಯನ್ನು ಈ ಕಛೇರಿಗೆ ಸಲ್ಲಿಸಲು ತಿಳಿಸಲಾಗಿತ್ತು ಎಂದಿದ್ದಾರೆ.
ಪುಸ್ತುತ ಮೊದಲನೇ ಹಂತದಲ್ಲಿ ಸದರಿ ಶಾಲೆಗಳು ಮತ್ತು ಶಿಕ್ಷಕರುಗಳು ನೀಡಿದ ವಿವರಣೆಗಳನ್ನು ಮಾತ್ರ ಕ್ರೋಢೀಕರಿಸಿ ವರದಿಯನ್ನು ಸಂಬಂಧಿಸಿದ ಆಯುಕ್ತಾಲಯಗಳಿಗೆ ಹಾಗೂ ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಸದರಿ ವರದಿ ಸ್ವೀಕೃತವಾದ ನಂತರ ಈ ಕಛೇರಿಯಿಂದ ನೀಡಲಾಗುವ ಸೂಚನಗಳಂತೆ ಕ್ರಮವಹಿಸಲು ತಿಳಿಸಿದ್ದಾರೆ.
ವಿಷ್ಣುವರ್ಧನ್ ಸಮಾಧಿ ನೆಲಸ ವಿಚಾರ: ಭೂಮಿ ಹಿಂಪಡೆಯಲು ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಪತ್ರ
BREAKING: 10 ನಿಮಿಷ ಲಿಫ್ಟ್ ನಲ್ಲಿ ಸಿಲುಕಿ ಸಚಿವ ರಾಮಲಿಂಗಾರೆಡ್ಡಿ ಪರದಾಟ