ಬೆಂಗಳೂರು : ರಾಜ್ಯದ ಹಲವೆಡೆ ಮುಂಗಾರು ಮಳೆಯ ಆರ್ಭ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ ಗೊಂಡಿತ್ತು. ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ಬಾಗಲಕೋಟೆಯಲ್ಲಿ ಭರ್ಜರಿ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದೆ.
ಇಂದು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು,ತುಮಕೂರು,ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.