ಮೈಸೂರು : ಮೈಸೂರು ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಈ ವೇಳೆ ಇಬ್ಬರ ಮೇಲೆ ಚಾಕು, ಕಟ್ಟಿಗೆ, ರಾಡ್ ಗಳಿಂದ ಹಲ್ಲೆ ನಡೆಸಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದೆ. ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಲಾಷ್, ರವಿ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಯುವಕರ ಗುಂಪಿನಿಂದ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ.
ನಂಜನಗೂಡು ನಿವಾಸಿ ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ್, ಸತ್ಯ ಮಂಟಿ ಎಂಬುವವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ನಾಲ್ವರು ಗುಂಪಿನ ಹಲ್ಲೆ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.