ಧರ್ಮಸ್ಥಳ : ಧರ್ಮಸ್ಥಳದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗಾದ ಯೂಟ್ಯೂಬರ್ ಗಳ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ.
ಹೌದು, ಸ್ಥಳೀಯ ಹರೀಶ್ ನಾಯ್ಕ್ ನೀಡಿದ ದೂರಿನ ಮೇರೆಗೆ ಯೂಟ್ಯೂಬರ್ ಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯೂಟ್ಯೂಬರ್ ಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್ ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ 6ರಂದು ಘಟನೆ ನಡೆದಿದ್ದು, ಈ ಬಗ್ಗೆ ಹರೀಶ್ ನಾಯ್ಕ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.
ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ಹರೀಶ್ ನಾಯ್ಕ ದೂರು ನೀಡಿದ್ದಾರೆ. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 50/2025 ಕಲಂ126(2)115(2) 352 ಜೊತೆಗೆ 3(5) ಬಿಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.